
ಪುತ್ತೂರು:ಇಲ್ಲಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾ ಪುತ್ತೂರಾಯ ಅವರೊಂದಿಗೆ ಅನುಚಿತವಾಗಿ ವರ್ತಿಸಿ ಹಲ್ಲೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಆರೋಪಿಗಳಾಗಿರುವ ತಾಯಿ, ಮಗನಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಘಟನೆಗೆ ಸಂಬಂಧಿಸಿ ಸುಳ್ಯ ಪದವಿನ ಜೊಹರಾ ಮತ್ತು ಅವರ ಮಗ ಸಮದ್ ಎಂಬವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡರೂ ಬಳಿಕ ಬಂಧಿಸದೇ ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಪ್ರತಿಭಟನೆ ನಡೆದಿತ್ತು.
ಈ ಪ್ರಕರಣದ ಆರೋಪಿಗಳಿಗೆ ಗ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಪುತ್ತೂರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುತ್ತದೆ.






