ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ(Suhas Shetty) ಕೊಲೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ (Anupam Agarwal) , ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದು, ಬಂಧಿತರ ವಿವರ ನೀಡಿದ್ದಾರೆ.

ಯಾರೆಲ್ಲಾ ಅರೆಸ್ಟ್?

ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿರುವಂತೆ ಬಂಧಿತ 8 ಆರೋಪಿಗಳ ಪೈಕಿ ಇಬ್ಬರು ಹಿಂದೂಗಳಿದ್ದಾರೆ. ಅವರ ವಿವರನ್ನು ನೀಡಿದ್ದಾರೆ. ಅಬ್ದುಲ್ ಸಫ್ವಾನ್ (29), ನಿಯಾಜ್ (28), ಕಲಂದರ್ ಶಾಫಿ (31), ಮೊಹಮ್ಮದ್ ಮುಝಮ್ಮಿಲ್ (32), ರಂಜಿತ್ (19), ನಾಗರಾಜ್ (20), ಮೊಹಮ್ಮದ್ ರಿಜ್ವಾನ್ (28) ಮತ್ತು ಆದಿಲ್ ಮೆಹರೂಫ್ ಬಂಧಿತರು.

ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದ್ದೇನು?

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಆರೋಪಿಗಳನ್ನು ಬಂಧಿಸಲಾಗಿದೆ. ಸಫ್ವಾನ್ ಪ್ರಮುಖ ಆರೋಪಿ. 2023ರಲ್ಲಿ ಅಬ್ದುಲ್ ಸಫ್ವಾನ್ ಮೇಲೆ ಮಾರಣಾಂತಿಕ ಹಲ್ಲೆ ಆಗಿತ್ತು. ಸಫ್ವಾನ್ಗೆ ಸುಹಾಸ್ ಶೆಟ್ಟಿ ಕೊಲೆ ಮಾಡುವ ಆತಂಕ ಇತ್ತು. ಹಾಗಾಗಿ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲು ತೀರ್ಮಾನಿಸಿದ್ದರು. ಅದಕ್ಕಾಗಿ ಫಾಜಿಲ್ ತಮ್ಮ ಆದಿಲ್ ಮೆಹರೂಫ್ ನನ್ನು ಸಂಪರ್ಕಿಸಿ ಕೊಲೆ ಮಾಡಲು ತೀರ್ಮಾನಿಸಿದ್ದರು ಎಂದು ಹೇಳಿದ್ದಾರೆ.

ಸುಹಾಸ್ ಕೊಲೆ ಮಾಡಲು ಸಫ್ವಾನ್ ತಂಡಕ್ಕೆ ಆದಿಲ್ 5 ಲಕ್ಷ ರೂ. ನೀಡಿದ್ದ. ಈ 5 ಲಕ್ಷ ರೂಪಾಯಿಗಾಗಿ ಆದಿಲ್ ಫಂಡಿಂಗ್ ಮಾಡಿದ್ದ. ನಿಯಾಜ್ ಸ್ನೇಹಿತರಾದ ನಾಗರಾಜ್ ಮತ್ತು ರಂಜಿನ್ ಸಂಪರ್ಕ ಮಾಡುತ್ತಾರೆ. ಈ ಇಬ್ಬರು ಸಫ್ವಾನ್ ಮನೆಯಲ್ಲಿ ಎರಡು ದಿನಗಳ ಕಾಲ ವಾಸವಿದ್ದರು. ಮೇ 1ರಂದು ಸುಹಾಸ್ ಚಲನವಲನ ಗಮನಿಸಿ ಕೊಲೆ ಮಾಡಿದ್ದಾರೆ ಎಂದು ಅನುಪಮ್ ಅಗರ್ವಾಲ್ ತಿಳಿಸಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಿಷ್ಟು

ಇನ್ನು ಪೊಲೀಸ್ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕೋಮು ಸಂಘರ್ಷ ತಡೆಗೆ ಐಜಿ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಆಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಸ್ಥಾಪಿಸಲಾಗುತ್ತೆ. ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧವೂ ಕಠಿಣ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!