ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನವು ಗಡಿ ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಅನಿಯಂತ್ರಿತ ಗುಂಡಿನ ದಾಳಿ ನಡೆಸಿದ್ದರಿಂದ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.

ಪಹಲ್‌ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್‌ ಸಿಂಧೂರ್ ದಾಳಿಯ ಕೆಲ ಗಂಟೆಗಳ ನಂತರ ಪಾಕಿಸ್ತಾನ ಪ್ರತಿಕ್ರಿಯಿಸಿದ್ದು, ಪಾಕಿಸ್ತಾನವು ”ಪ್ರಮಾಣಾನುಸಾರವಾಗಿ” ಪ್ರತಿಕ್ರಿಯೆ ನೀಡಿದೆ ಎಂದು ಸೇನೆ ತಿಳಿಸಿದೆ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದೊಳಗೆ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೈಬಾ ನಡೆಸುತ್ತಿರುವ ಭಯೋತ್ಪಾದಕ ತರಬೇತಿ ಶಿಬಿರಗಳ ಮೇಲೆ ಭಾರತ ನಿಖರವಾದ ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ ಈ ಗುಂಡಿನ ದಾಳಿ ನಡೆದಿದೆ.

1971 ರ ಯುದ್ಧದ ನಂತರ ಪಾಕಿಸ್ತಾನದ ವಿರುದ್ಧ ಮೊದಲ ಬಾರಿಗೆ ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳು ಬೆಳಗಿನ ಜಾವ 1.44 ಕ್ಕೆ ‘ಆಪರೇಷನ್ ಸಿಂಧೂರ್’ ಎಂಬ ಸಂಕೇತನಾಮದೊಂದಿಗೆ ರಾತ್ರಿಯಿಡೀ ದಾಳಿ ನಡೆಸಿ ಒಂಬತ್ತು ಉಗ್ರಗಾಮಿ ಶಿಬಿರಗಳನ್ನು ನಾಶಪಡಿಸಿದೆ

Leave a Reply

Your email address will not be published. Required fields are marked *

Join WhatsApp Group
error: Content is protected !!