
ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿರುವ ಗುರುದ್ವಾರದ ಮೇಲೆ ಪಾಕಿಸ್ತಾನ ಸೇನೆ ನಡೆಸಿದ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಸೇನೆ ಇಂದು ಬೆಳಗ್ಗೆ ತಿಳಿಸಿದೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದೊಳಗೆ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೈಬಾ ನಡೆಸುತ್ತಿರುವ ಭಯೋತ್ಪಾದಕ ತರಬೇತಿ ಶಿಬಿರಗಳ ಮೇಲೆ ಭಾರತ ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ ಈ ಗುಂಡಿನ ದಾಳಿ ನಡೆದಿದೆ.
ಪಾಕಿಸ್ತಾನದ ಈ ಹೇಡಿತನದ ದಾಳಿಯನ್ನು ಪಂಜಾಬ್ ಸಚಿವ ಸುಖ್‌ಬೀರ್ ಸಿಂಗ್ ಬಾದಲ್ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಪೋಸ್ಟ್ ಮಾಡಿ, ಪೂಂಚ್‌ನಲ್ಲಿರುವ ಪವಿತ್ರ ಕೇಂದ್ರ ಗುರುದ್ವಾರ ಶ್ರೀ ಗುರು ಸಿಂಗ್ ಸಭಾ ಸಾಹಿಬ್ ಮೇಲೆ ಪಾಕಿಸ್ತಾನ ಸೇನೆ ನಡೆಸಿದ ಅಮಾನವೀಯ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಇದರಲ್ಲಿ ಭಾಯಿ ಅಮ್ರಿಕ್ ಸಿಂಗ್ ಜಿ (ರಾಗಿ ಸಿಂಗ್), ಭಾಯಿ ಅಮರ್‌ಜಿತ್ ಸಿಂಗ್ ಮತ್ತು ಭಾಯಿ ರಂಜಿತ್ ಸಿಂಗ್ ಸೇರಿದಂತೆ ಹಲವು ಅಮಾಯಕ ಗುರ್ಸಿಖ್‌ಗಳು ಪ್ರಾಣ ಕಳೆದುಕೊಂಡರು ಎಂದು ಹೇಳಿದ್ದಾರೆ






