
ಪುತ್ತೂರು: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಮಂಗಳೂರು, ರೋಟರಿ ಕ್ಲಬ್ ಪುತ್ತೂರು ಸಿಟಿ ಮತ್ತು ರೋಯಲ್ ಗ್ರೂಪ್ ಬುಳೇರಿಕಟ್ಟೆ ಇದರ ಸಹಯೋಗದಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಇದರ ಸಹಯೋಗದಲ್ಲಿ ಕ್ಯಾನ್ಸರ್ ಕಾಯಿಲೆ ಮುಂಜಾಗೃತಾ ತಪಾಸಣೆ ಮತ್ತು ಮಾಹಿತಿ ಶಿಬಿರ ಬುಳೇರಿಕಟ್ಟೆ ದ.ಕ.ಜಿ.ಪಂ. ಹಿ.ಪ್ರಾ ಶಾಲೆಯಲ್ಲಿ ಮೇ.೧೧ರಂದು ಬೆಳಿಗ್ಗೆ ೯ರಿಂದ ಮಧ್ಯಾಹ್ನ ೧.೩೦ರ ತನಕ ನಡೆಯಲಿದೆ. ಶಿಬಿರದಲ್ಲಿ ವೈದ್ಯಕೀಯ ಶಾಸ್ತ್ರ ವಿಭಾಗ, ಶಸ್ತ್ರ ಚಿಕಿತ್ಸಾ ವಿಭಾಗ, ಚರ್ಮರೋಗ ವಿಭಾಗ ಮಕ್ಕಳ ವಿಭಾಗ, ಕಿವಿ, ಮೂಗು, ಗಂಟಲು ವಿಭಾಗ, ಸ್ತ್ರೀ ರೋಗ ಮತ್ತು ಪ್ರಸೂತಿ ವಿಭಾಗ, ಕಣ್ಣಿನ ವಿಭಾಗ ಮತ್ತು ಮೂಳೆ ವಿಭಾಗಕ್ಕೆ ಸಂಬಂಧಿಸಿದ ಚಿಕಿತ್ಸೆಗಳು ದೊರೆಯುವುದು ಎಂದು ಪ್ರಕಟಣೆ ತಿಳಿಸಿದೆ.







