ಮೇ 11ರಂದು ಭಾನುವಾರ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಕೋಲಾರ, ಮೈಸೂರು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ (Karnataka Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಉತ್ತರ ಒಳನಾಡಿನಿಂದ ಮನ್ನಾರ್ ಕೊಲ್ಲಿಯವರೆಗಿನ ಉತ್ತರ-ದಕ್ಷಿಣ ವಾಯುಭಾರ ಕುಸಿತವು ಸದ್ಯ ಮರಾಠವಾಡದಿಂದ ಮನ್ನಾರ್ ಕೊಲ್ಲಿಯವರೆಗೆ, ಕರ್ನಾಟಕದ ಒಳನಾಡಿನಾದ್ಯಂತ ಮತ್ತು ತಮಿಳುನಾಡಿನಾದ್ಯಂತ ಹರಡಿದ್ದು, ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರಕ್ಕೆ ವಿಸ್ತರಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 5 ದಿನಗಳವರೆಗೆ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನದಲ್ಲಿ ಇಳಿಕೆಯ ಪ್ರವೃತ್ತಿಯೊಂದಿಗೆ ದೊಡ್ಡ ಬದಲಾವಣೆಗಳಿಲ್ಲ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಗಾಳಿಯೂ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 33°C ಮತ್ತು 22°C ಇರುವ ಸಾಧ್ಯತೆ ಇದೆ.

ಮೇ 12ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆ ಹಾಗೂ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ವಿಜಯನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ, ಮೈಸೂರು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೇ 13ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ವಿಜಯನಗರ, ಮೈಸೂರು, ಕೋಲಾರ, ಮಂಡ್ಯ, ಮೈಸೂರು ಸೇರಿ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೇ 14ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ವಿಜಯನಗರ, ಮೈಸೂರು, ಕೋಲಾರ, ಮಂಡ್ಯ, ಮೈಸೂರು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೇ 15ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಯ ಬಹುತೇಕ ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮೇ 16ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆ ಹಾಗೂ ಬಳ್ಳಾರಿ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!