ಬೆಂಗಳೂರು, ಮೇ 12: ಸರ್ಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕವಾಗಿ ನೇಮಕಾತಿ ಪೂರ್ಣಗೊಳಿಸುವುದು ಒಂದು ಸವಾಲಿನ ಕೆಲಸವೇ ಸರಿ ಎಂಬುದು ನನ್ನ ಭಾವನೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (BMTC) ಹೊಸದಾಗಿ ನೇಮಕವಾದ ಎರಡು ಸಾವಿರಕ್ಕೂ ಹೆಚ್ಚು ನಿರ್ವಾಹಕರಿಗೆ ನೇಮಕಾತಿ ಆದೇಶ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಬಸ್ ಅಪಘಾತಗಳ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಅಪಘಾತಗಳಿಗೆ ಕಾರಣರಾದ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಅಪಘಾತದಲ್ಲಿ ಭಾರತಕ್ಕೆ ಮೊದಲ ಸ್ಥಾನ: ಕಳವಳ
ಅಂತಾರಾಷ್ಟ್ರೀಯ ಮಟ್ಟದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಬಗ್ಗೆ ಅವಲೋಕಿಸಿದಾಗ, ಭಾರತ ದೇಶವು ರಸ್ತೆ ಅಪಘಾತದಲ್ಲಿ ಮೊದಲ ಸ್ಥಾನದಲ್ಲಿದೆ. ಅತೀ ಹೆಚ್ಚು ಅಪಘಾತ, ಸಾವು ನೋವು ದಾಖಲಾಗುತ್ತಿರುವುದು ನಮ್ಮ‌ ದೇಶದಲ್ಲಿ ಇದು ಅತ್ಯಂತ ಕಳವಳಕಾರಿ. ಅದನ್ನು ತಡೆಗಟ್ಟಲು ನಮ್ಮ ಸಾರಿಗೆ ಇಲಾಖೆಯಿಂದ ( RTO – ROAD Safety Fund) ಸಹ ವಿವಿಧ ಅಭಿಯಾನಗಳನ್ನು‌ ಸಹ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಕರ್ನಾಟಕ ಸಾರಿಗೆ ಸಂಸ್ಥೆಗಳ ಬಸ್ಸುಗಳ ಅಪಘಾತಗಳು ಅಧಿಕವಾಗುತ್ತಿವೆ. ಅಪಘಾತಕ್ಕೆ ಯಾರೇ ಕಾರಣವಿರಬಹುದು, ಆದರೆ ಅಪಘಾತದಿಂದ ನಡೆಯುವ ಸಾವು ನೋವುಗಳಿಗೆ ಯಾವುದೇ ಕಾರಣ/ ಪರಿಹಾರವು ನ್ಯಾಯ ಒದಗಿಸುವುದಿಲ್ಲ. ಅಪಘಾತದಿಂದ ಕಳೆದುಕೊಂಡ‌ ಅಮೂಲ್ಯ ಜೀವಗಳನ್ನು ವಾಪಸ್ಸು ತರಲು ಸಾಧ್ಯವೇ? ಅವರ ಅವಲಂಬಿತರು ಅನುಭವಿಸುವ ನೋವಿಗೆ ಪರ್ಯಾಯವಿದೆಯೇ? ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಎರಡು ವಾರದ ಹಿಂದೆ ಅಪಘಾತದಲ್ಲಿ ಕಾಲು‌ ಕಳೆದುಕೊಂಡ ಚಾಲನಾ ಸಿಬ್ಬಂದಿಯೊಬ್ಬರಿಗೆ ರೂ.25 ಲಕ್ಷ ಪರಿಹಾರ ಹಣವನ್ನು ನಾವು ನೀಡುವಾಗ ನನಗೆ ಅರ್ಥವಾಗಿದ್ದು ಒಂದೇ ವಿಷಯ. ಯಾವುದೇ ಆರ್ಥಿಕ ಸೌಲಭ್ಯವು ಆ ಸಿಬ್ಬಂದಿಗೆ ತನ್ನ ಹಿಂದಿನ ಸಂತೋಷದ ಜೀವನ ತಂದು‌ ಕೊಡುವುದಿಲ್ಲ. ಬೇರೆಯವರನ್ನು ನೋಡಿದಾಗ ಅವನಿಗಾಗುವ ಮಾನಸಿಕ‌ ವೇದನೆ ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ ಎಂದು ಅವವರು ವಿಷಾಧಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!