ಮಹಿಳೆಯರು ಮತ್ತು ಪುರುಷರು ಜಗಳವಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಅಲ್ಲದೆ, ಅದರಲ್ಲಿ ಒಬ್ಬ ಅರೆನಗ್ನ ಪರಿಸ್ಥಿತಿಯಲ್ಲಿ ಕಾಣಿಸಿಕೊಂಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಉತ್ತರಪ್ರದೇಶದ ಝಾನ್ಸಿಯಾ ನವಾಬಾದ್ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿನ ಸ್ಪಾ ಸೆಂಟರ್ವೊಂದಲ್ಲಿ ನಡೆದ ಘಟನೆಯಾಗಿದೆ ಎಂದು ವರದಿಯಾಗಿದೆ.

ಜಗಳಕ್ಕೆ ಕಾರಣವೇನು?
ಸ್ಪಾ ಕೇಂದ್ರವನ್ನು ಮಹಿಮಾ ಎಂಬ ಮಹಿಳಾ ನಡೆಸುತ್ತಿದ್ದಾಳೆ. ಕಳೆದ ಆರು ತಿಂಗಳ ಹಿಂದೆ ಒಬ್ಬ ಯುವಕ ಹಾಗೂ ಯುವತಿಯನ್ನು ಕೆಲಸದಿಂದ ತೆಗೆದು ಹಾಕಿದ್ದರು. ಅವರನ್ನು ಇದೀಗ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಒತ್ತಡ ಹೇರುತ್ತಿದ್ದರು.

ಒಂದು ವೇಳೆ ಕೆಲಸ ನೀಡದಿದ್ದರೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದರು. ಅಲ್ಲದೆ, ಕೆಲಸದ ಬಗ್ಗೆ ನಿರಾಕರಿಸಿದ್ರೆ ಸರಿ ಇರೋದಿಲ್ಲ ಎಂದು ಅವಾಚ್ಯ ಪದಗಳಿಂದ ನಿಂದಿಸಿ ಮಾತನಾಡುತ್ತಿದ್ದಾರೆ. ಇದರಿಂದ ಒಬ್ಬರಿಗೊಬ್ಬರಿಗೆ ಜಗಳ ಕಾರಣಾವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಲೇ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!