ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಮತ್ತು ಪಾಕಿಸ್ತಾನದ ನಡುವಿನ ಪರಿಸ್ಥಿತಿ ಬಗ್ಗೆ ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡುವ ಮೊದಲೇ ಡೊನಾಲ್ಡ್ ಟ್ರಂಪ್ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ನಾವು ಪರಮಾಣು ಸಂಘರ್ಷವನ್ನು ನಿಲ್ಲಿಸಿದ್ದೇವೆ.

ಅದು ಕೆಟ್ಟ ಪರಮಾಣು ಯುದ್ಧವಾಗಿರುತ್ತಿತ್ತು ಎಂದು ನಾನು ಭಾವಿಸುತ್ತೇನೆ. ಪರಮಾಣು ಯುದ್ದ ನಡೆದ್ರೆ ಲಕ್ಷಾಂತರ ಜನರು ಕೊಲ್ಲಲ್ಪಡುತ್ತಿದ್ದರು. ಇಂತಹ ಪರಮಾಣು ಯುದ್ಧವನ್ನು ನಾವು ನಿಲ್ಲಿಸಿದ್ದೇವೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಶಮನ ಮಾಡುವಲ್ಲಿ ನಿರತರಾದ ಉಪರಾಷ್ಟ್ರಪತಿ ಜೆಡಿ ವ್ಯಾನ್ಸ್ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ನಾವು ಪಾಕಿಸ್ತಾನದೊಂದಿಗೆ ಬಹಳಷ್ಟು ವ್ಯಾಪಾರ ಮಾಡಲಿದ್ದೇವೆ. ನಾವು ಭಾರತದೊಂದಿಗೆ ಬಹಳಷ್ಟು ವ್ಯಾಪಾರ ಮಾಡಲಿದ್ದೇವೆ. ನಾವು ಇದೀಗ ಭಾರತದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಶೀಘ್ರದಲ್ಲೇ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಲಿದ್ದೇವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಕದನ ವಿರಾಮ ಘೋಷಣೆ ಮಾಡದಿದ್ರೆ ಎರಡೂ ದೇಶಗಳ ಜೊತೆಗಿನ ವ್ಯಾಪಾರ ಬಂದ್ ಮಾಡೋದಾಗಿ ಹೇಳಿದ್ದೆ ಎಂದು ಹೇಳುವ ಮೂಲಕ ಕದನ ವಿರಾಮದ ಕ್ರೆಡಿಟ್‌ನ್ನು ಡೊನಾಲ್ಡ್ ಟ್ರಂಪ್ ತೆಗೆದುಕೊಂಡರು. ಆದ್ರೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ, ನಮಗೆ ಯಾರ ಮಧ್ಯಸ್ಥಿಕೆಯೂ ಬೇಡ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದವು. ಇತ್ತ ಅಮೆರಿಕ ಮಧ್ಯಸ್ಥಿಕೆಯನ್ನು ಭಾರತದ ವಿರೋಧ ಪಕ್ಷದ ನಾಯಕರು ತೀವ್ರವಾಗಿ ವಿರೋಧಿಸಿದ್ದರು. ಭಾರತ ಮತ್ತು ಪಾಕಿಸ್ತಾನದ ದೇಶಗಳ ನಡುವೆ ಸಂಘರ್ಷ ನಡೆಯುವಾಗ ಮೂರನೇ ದೇಶ ಮಧ್ಯೆ ಪ್ರವೇಶಿಸಿದ್ದು ಯಾಕೆ ಎಂದು ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನೆ ಮಾಡಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!