ಮಸೀದಿಯಲ್ಲಿದ್ದ ಧರ್ಮಗ್ರಂಥ ಕದ್ದೊಯ್ದು ಪಕ್ಕದ ಜಮೀನಿನಲ್ಲಿ ಸುಟ್ಟು ಹಾಕಿರುವ ಘಟನೆ ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ನಡೆದಿದೆ.

ಸಂತಿಬಸ್ತವಾಡ ಗ್ರಾಮದ ನಿರ್ಮಾಣ ಹಂತದ ಮಸೀದಿಯ ಕೆಳಮಹಡಿಯಲ್ಲಿದ್ದ ಧರ್ಮಗ್ರಂಥವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ.

ಸೋಮವಾರ (ಮೇ 12) ಪ್ರಾರ್ಥನೆಗೆಂದು ಬೆಳಗಿ‌ನ ಜಾವ ಬಂದಾಗ ಧರ್ಮಗ್ರಂಥ ಇಲ್ಲದಿರುವುದು ಬೆಳಕಿಗೆ ಬಂದಿದೆ. ಪ್ರಾರ್ಥನೆ ಮುಗಿಸಿದ ಬಳಿಕ ಸುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಸುಟ್ಟು ಹಾಕಿರುವುದು ಕಂಡು ಬಂದಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ,ಡಿಸಿಪಿ ರೋಹನ ಜಗದೀಶ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ತಡರಾತ್ರಿ ಮಸೀದಿಯೊಳಗಿನ ಧರ್ಮಗ್ರಂಥ ಕದ್ದು ಕೊಂಡೊಯ್ದಿದ್ದಾರೆ. ಬಳಿಕ ಧರ್ಮಗ್ರಂಥ ಸುಟ್ಟು ಹಾಕಿದ್ದಾರೆಂಬ ಮಾಹಿತಿ ಇದೆ. ಆರೋಪಿಗಳ ಬಂಧನಕ್ಕಾಗಿ ಈಗಾಗಲೇ ತಂಡ ರಚನೆ ‌ಮಾಡಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ. ಸದ್ಯ ಯುವಕರು ಪ್ರತಿಭಟನೆ ಮಾಡಲು ಅವಕಾಶ ಕೇಳಿದ್ದಾರೆ. ಈ ಸಮಯದಲ್ಲಿ ಪ್ರತಿಭಟನೆ ‌ಬೇಡ ಎಂದು ಮನವಿ ಮಾಡಿದ್ದೇವೆ. ಅವರು ಸಾಂಕೇತಿಕವಾಗಿ ವಿಟಿಯು ಬಳಿ ಪ್ರತಿಭಟನೆ ಮಾಡಲಿದ್ದಾರೆ ಎಂದರು.

ಸಂತಿ ಬಸ್ತವಾಡ ಗ್ರಾಮದಲ್ಲಿ ಕುರಾನ್ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಮುಸ್ಲಿಮರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ತೇರಾ ಮೇರಾ ರಿಷ್ತಾ ಕ್ಯಾ ಹೈ ಲಾ ಇಲಾಹಾ ಇಲ್ಲಲ್ಲಾ. ಅಲ್ಲಾ ಹು ಅಕ್ಬರ್ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನೆ ಕೈಬಿಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಪ್ರತಿಭಟನಾಕಾರರ ಶಾಸಕ‌ ಆಸೀಫ‌ ಸೇಠ ಪೊಲೀಸರು ಮನವೊಲಿಸಲು ಪ್ರಯತ್ನಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!