ಮದುವೆಗೆ ಹೊರಟಿದ್ದ ಖಾಸಗಿ ಬಸ್‌ ಶಿರಾಡಿ ಘಾಟಿಯಲ್ಲಿ ಅಪಘಾತಕ್ಕೀಡಾಗಿದೆ.

ಮದುವೆಗೆಂದು ಬೆಂಗಳೂರಿನಿಂದ-ಮಂಗಳೂರಿಗೆ ಹೊರಟಿದ್ದ ಖಾಸಗಿ ಬಸ್‌ ಮಂಗಳವಾರ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ

ಅಲ್ಪಸ್ವಲ್ಪ ಗಾಯಗೊಂಡವರನ್ನು ಇತರ ವಾಹನಗಳ ಸವಾರರು ಕೂಡಲೇ ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಸಂದರ್ಭ ಸ್ವಲ್ಪ ಸಮಯ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!