ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ನೋಟಿಸ್ ಜಾರಿ ಮಾಡಲಾಗಿದೆ. ಬಿಡದಿಯಲ್ಲಿ ಬುಲೆಟ್ ಅಟ್ಯಾಕ್ ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ನೋಟೀಸ್ ಜಾರಿ ಮಾಡಲಾಗಿದೆ.

ಇನ್ನು ನೋಟಿಸ್ ಸಂಬಂಧ ರಿಕ್ಕಿ ರೈ 20 ದಿನಗಳ ಕಾಲಾವಕಾಶ ಕೇಳಿದ್ದು, ಮೆಡಿಕಲ್ ರಿಪೋರ್ಟ್ ಕೊಟ್ಟು ಸಮಯಾವಕಾಶ ಕೇಳಿದ್ದಾರೆ ಎಂದು ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮಾಹಿತಿ ನೀಡಿದ್ದಾರೆ.

ಪ್ರಕರಣದಲ್ಲಿ ವಿಠಲ್ ಪ್ರಮುಖ ಆರೋಪಿಯಾಗಿದ್ದಾನೆ. ಆತನನ್ನು ದಸ್ತಗಿರಿ ಮಾಡಿ ಈಗಾಗಲೇ ಜೈಲಿಗೆ ಬಿಟ್ಟಿದ್ದೇವೆ. ಕೆಲವೊಂದು ಸಾಕ್ಷ್ಯಾಧಾರಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದೇವೆ. ಆ ವರದಿಗಳು ಬಂದ ಮೇಲೆ ಪ್ರಕರಣ ತನಿಖೆ ಚುರುಕುಗೊಳಿಸುತ್ತೇವೆ. ಸದ್ಯಕ್ಕೆ ವಿಠಲ್ ಒಬ್ಬನೇ ಕೇಸ್‌ನಲ್ಲಿ ಆರೋಪಿಯಾಗಿದ್ದಾನೆ. ರಿಕ್ಕಿ ರೈ ವಿಚಾರಣೆಗೆ ಹಾಜರಾದ ಬಳಿಕ ಮತ್ತಷ್ಟು ವಿಚಾರಗಳು ಹೊರಬರಬೇಕಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!