
ಗುಂಡ್ಯ; ಕೆಎಸ್ ಆರ್ ಟಿ ಸಿ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ ಬಸ್ ಹಾಗೂ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುಂಡ್ಯದಲ್ಲಿ ನಡೆದಿದೆ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಗುಂಡ್ಯ ಪೇಟೆಯಿಂದ ಸುಮಾರು 100 ಮೀಟರ್ ದೂರದಲ್ಲಿರುವ ಅಪಾಯಕಾರಿ ತಿರುವಿನಲ್ಲಿ ಎದುರಿನಿಂದ ವೇಗವಾಗಿ ಬರುತ್ತಿದ್ದ ಲಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಢಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯ ಮುಂಭಾಗಕ್ಕೂ ಹಾನಿಯಾಗಿದೆ. ಘಟನೆಯಲ್ಲಿ ಚಾಲಕರು ಸೇರಿದಂತೆ ಒಟ್ಟು 4 ಜನರಿಗೆ ಗಾಯಗಳಾಗಿವೆ ಎನ್ನಲಾಗಿದೆ.






