ವ್ಯಕ್ತಿಯೋರ್ವ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

ಮಧು ಅಲಿಯಾಸ್ ಅಶೋಕ್ ಮೃತ ವ್ಯಕ್ತಿ. ಮದ್ಯ ಸೇವಿಸಿ ಬಳಿಕ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮೂರು ವರ್ಷದ ಮಗಳಿಗೆ ಅನಾರೋಗ್ಯ ಕಾಡುತ್ತಿದ್ದ ಹಿನ್ನೆಲೆಯಲ್ಲಿ ಪತ್ನಿ ವಾರದ ಹಿಂದೆ ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದರು. ನಿನ್ನೆ ಮಧು ಅವರ ತಾಯಿ ಕೂಡ ಬೆಂಗಳೂರಿಗೆ ಆಗಮಿಸಿದ್ದರು. ಮನೆಯಲ್ಲಿ ಯಾರೂ ಇರಲಿಲ್ಲ. ಜೀವನದಲ್ಲಿ ಜಿಗುಪ್ಸೆಗೊಂಡು ಕಂಠಪೂರ್ತಿ ಕುಡಿದು ಡಬಲ್ ಬ್ಯಾರಲ್ ಬಂದೂಕಿನಿಂದ ತನಗೆ ತಾನೇ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದಾರೆ.

ಘಟನಾ ಸ್ಥಳಕ್ಕೆ ಸೋಮವಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!