ಆಂಧ್ರಪ್ರದೇಶದ ವಿಜಯವಾಡದಲ್ಲಿ ಯುವ ಜೋಡಿ ಹಕ್ಕಿಗಳಿಬ್ಬರು ಬೈಕ್‌ನಲ್ಲಿ ಅಪಾಯಕಾರಿಯಾಗಿ ಪ್ರಯಾಣಿಸುತ್ತಲೇ ರೊಮ್ಯಾನ್ಸ್‌ ಮಾಡಿರುವಂತಹ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಜೋಡಿಯ ನಡೆಗೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಈ ಘಟನೆ ಶನಿವಾರ ರಾಷ್ಟ್ರೀಯ ಹೆದ್ದಾರಿ-5ರ ರಾಮಲಿಂಗೇಶ್ವರ ನಗರ ಫ್ಲೈಓವರ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ವೈರಲ್ ಆಗಿರುವ ವೀಡಿಯೊದಲ್ಲಿ ಯುವತಿ ಬೈಕ್‌ನ ಇಂಧನ ಟ್ಯಾಂಕ್ ಮೇಲೆ ಮಲಗಿರುವುದು ಕಾಣಿಸಿಕೊಂಡಿದೆ. ಮಾತ್ರವಲ್ಲದೇ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಅಜಾಗರೂಕತೆಯಿಂದ ಬೈಕ್‌ ಅನ್ನು ಓಡಿಸುತ್ತಿರುವುದು ಕಾಣಿಸಿಕೊಂಡಿದೆ.

ಈ ವಿಡಿಯೋವನ್ನು ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಇತರರು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದು ಶೀಘ್ರವೇ ಭಾರೀ ವೈರಲ್‌ ಆಗಿದ್ದು, ನೆಟ್ಟಿಗರು ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಸಾರ್ವಜನಿಕರ ಆಕ್ರೋಶದ ಬಳಿಕ ವಿಜಯವಾಡ ಪೊಲೀಸರು ತನಿಖೆಯನ್ನು ಪ್ರಾರಂಭಿಸಿ ಜೋಡಿಯನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ. ಇಬ್ಬರೂ ಕುಡಿದು ವಾಹನ ಚಲಾಯಿಸುವುದು, ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುವುದು ಮತ್ತು ಸಂಚಾರ ನಿಯಮಗಳ ಉಲ್ಲಂಘಗೆಗಾಗಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!