
ಸುಹಾಸ್ ಶೆಟ್ಟಿ ಹತ್ಯೆಯ ಆರೋಪಿ ಚೊಟ್ಟೆ ನೌಷಾದ್ ಮೇಲೆ ಬಿ ಬ್ಯಾರಕ್‌ನ ಹಲವು ಸಹ ಕೈದಿಗಳಿಂದ ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ಅಟ್ಯಾಕ್ ಮಾಡಿರುವಂತಹ ಘಟನೆ ಮಂಗಳೂರು ಸೆಂಟ್ರಲ್ ಜೈಲಿನಲ್ಲಿ ನಡೆದಿದೆ.
ಆರೋಪಿ ಚೊಟ್ಟೆ ನೌಷಾದ್ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯವಾಗಿತ್ತು. ಹಾಗಾಗಿ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಮೈಸೂರು ಕಾರಾಗೃಹಕ್ಕೆ ಶಿಫ್ಟ್ ಮಾಡಲು ಸಿದ್ಧತೆ ನಡೆಸಿದ್ದರು. ಈ ಮಧ್ಯೆ ನೌಷಾದ್, ಮಂಗಳೂರು ಜೈಲಿನಲ್ಲಿ ಯಾರನ್ನೋ ನೋಡಬೇಕು ಎಂದಿದ್ದ. ಹಾಗಾಗಿ ಜೈಲಿನಲ್ಲಿ ಮತ್ತೋರ್ವ ಕೈದಿ ಭೇಟಿಗಾಗಿ ಪೊಲೀಸರು ಕರೆದುಕೊಂಡು ಬಂದಿದ್ದರು. ಈ ವೇಳೆ ಇದ್ದಕಿದ್ದಂತೆ ನೌಷಾದ್ ಮೇಲೆ ಸಹ ಕೈದಿಗಳು ಅಟ್ಯಾಕ್ ಮಾಡಿದ್ದಾರೆ.









