ರಾಜ್ಯ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಪ್ರಭಾರಿಯಾಗಿ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಅವರನ್ನ ನೇಮಕ ಮಾಡಲಾಗಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರ ಸೇವಾವಧಿ ಇಂದು (21) ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾಗಲಿರುವ ಹುದ್ದೆಗೆ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಆಯ್ಕೆಯಾಗಿದ್ದಾರೆ.

ಕೆಲ ದಿನಗಳ ಮಟ್ಟಿಗೆ ಪ್ರಭಾರಿ ಡಿಜಿ-ಐಜಿಪಿಯಾಗಿ ಸಲೀಂ ಅವರನ್ನು ನೇಮಿಸಿ ತದನಂತರ ಕೇಂದ್ರ ಲೋಕಸೇವಾ ಆಯೋಗದ ಸಮ್ಮತಿ ಬಳಿಕ ಅವರನ್ನು ಕಾಯಂಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಸೇವಾ ಹಿರಿತನ ಆಧಾರದ ಮೇರೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್‌, ಸಿಐಡಿ ಡಿಜಿಪಿ ಸಲೀಂ, ಸೈಬರ್ ವಿಭಾಗದ ಡಿಜಿಪಿ ಪ್ರಣವ್ ಮೊಹಂತಿ ಸೇರಿ ಏಳು ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳಿದ್ದಾರೆ. ಆದರೆ ಹಿರಿತನದ ಮಾನದಂಡದಲ್ಲಿ ಡಿಜಿ-ಐಪಿಪಿ ಹುದ್ದೆಗೆ ಸಲೀಂರನ್ನ ನೇಮಕ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಲವು ಹೊಂದಿದ್ದ ಸಲೀಂ ಅವರು ನೂತನ ಡಿಜಿ-ಐಜಿಪಿ ಹುದ್ದೆಯನ್ನು ಪ್ರಭಾರಿಯಾಗಿ ಅಲಂಕರಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!