ಆನೇಕಲ್ ತಾಲೂಕಿನ ಚಂದಾಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ರೈಲ್ವೆ ಬ್ರಿಡ್ಜ್ ಸಮೀಪ ಅಪರಿಚಿತ ಯುವತಿಯ ಶವ (Dead Body Found) ಸೂಟ್ ಕೇಸ್‌ನಲ್ಲಿ ಪತ್ತೆಯಾಗಿದೆ. ನೀಲಿ ಬಣ್ಣದ ಸೂಟ್ ಕೇಸ್ ಕಂಡಿದ್ದು, ಅದನ್ನು ಪರಿಶೀಲಿಸಿದಾಗ ಸಾರ್ವಜನಿಕರು ಶಾಕ್ ಆಗಿದ್ದಾರೆ.

ಸುಮಾರು 18 ವರ್ಷ ವಯಸ್ಸಿನ ಯುವತಿ ಶವ ಸೂಟ್ ಕೇಸ್‌ನಲ್ಲಿ ಪತ್ತೆಯಾಗಿದೆ.

ಯುವತಿ ಗುಲಾಬಿ ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದು, ಕೈ ಕಾಲುಗಳನ್ನು ಮಡಚಿ ಇಡೀ ದೇಹವನ್ನು ಸೂಟ್ ಕೇಸ್‌ನಲ್ಲಿ ತುಂಬಲಾಗಿದೆ. ಕಿವಿ ಮತ್ತು ಮೂಗಿನಲ್ಲಿ ರಕ್ತಸ್ರಾವ ಆಗಿರುವ ಕುರುಹು ಇದ್ದು, ಉಳಿದಂತೆ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿಲ್ಲ. ಬೇರೆಲ್ಲೋ ಕೊಲೆಗೈದು ರೈಲಿನಲ್ಲಿ ಸಾಗುವ ವೇಳೆ ಮೃತದೇಹವನ್ನು ಹೊರಗೆ ಎಸೆದಿರುವ ಶಂಕೆ ಇದೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

ಆರಂಭದಲ್ಲಿ ಸ್ಥಳೀಯರಿಗೆ ಸೂಟ್ ಕೇಸ್‌ನಲ್ಲಿ ಯುವತಿ ಮುಖ ಮಾತ್ರ ಕಾಣಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸೂರ್ಯನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರೈಲ್ವೆ ಹಳಿ ಸಮೀಪ ಯುವತಿ ಶವ ಪತ್ತೆ ಹಿನ್ನೆಲೆ ರೈಲ್ವೆ ಕೇಸ್ ದಾಖಲಿಸಿಕೊಳ್ಳಲಿದ್ದಾರೆ ಎಂದು ಪೊಲೀಸರು ಕಾದು ಕುಳಿತಿದ್ದರು. ಆದರೆ ರೈಲ್ವೆ ಪೊಲೀಸರು ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದ ಬಳಿಕ ಸೂರ್ಯನಗರ ಠಾಣೆ ಪೊಲೀಸರು ‌ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!