ರಾಮನಗರ ಹೆಸರು ಬದಲಾವಣೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆಜನ್ಮ ಕನಸು. ಆ ಕನಸಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದರು. ಆದರೆ ಕೊನೆಗೂ ಡಿಕೆಶಿ ಹಿಡಿದ ಹಠ ಸಾಧಿಸಿಬಿಟ್ಟಿದ್ದಾರೆ.

ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಡಿ.ಕೆ ಶಿವಕುಮಾರ್ ರಾಮನಗರ ಯುದ್ಧ ಗೆದ್ದಿದ್ದಾರೆ.

ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಜಿಲ್ಲೆ ಅಂತಾ ನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿರುವ ಡಿ.ಕೆ.ಶಿವಕುಮಾರ್, ಇವತ್ತಿನ ಸಭೆಯಲ್ಲಿ ರಾಮನಗರ ಜಿಲ್ಲೆಯ ಹೆಸರು ಬದಲಾಯಿಸುವ ಬಗ್ಗೆ ನಿರ್ಧಾರ ಮಾಡಲಾಗಿದೆ. ಅಧಿಕೃತವಾಗಿ ಈ ಸಂಬಂಧ ಆದೇಶ ಹೊರ ಬೀಳಲಿದೆ. ಇನ್ಮುಂದೆ ರಾಮನಗರ ಹೆಡ್ ಕ್ವಾಟ್ರಸ್ ಆಗಿರಲಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಹೆಸರು ಬದಲಾವಣೆ ಮಾಡುವ ಸಂಬಂಧ ಕೇಂದ್ರ ಸರ್ಕಾರದ ಅನುಮತಿ ಬೇಕಾ ಎನ್ನುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಇಲ್ಲ ಕೇಂದ್ರ ಸರ್ಕಾರಕ್ಕೆ ಯಾವುದೇ ಪವರ್ ಇಲ್ಲ. ಇದು ನಮ್ಮ ಹಕ್ಕು ಎಂದರು.

ಡಿಕೆಶಿಗೆ ಸತ್ಯಹರಿಶ್ಚಂದ್ರ ಅಂತ ಹೆಸರಿಟ್ರೆ ಸತ್ಯವಂತರಾಗಲ್ಲ?: ರಾಮನಗರದ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಇಂದಿನಿಂದ ಘೋಷಣೆ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್ ಅಶೋಕ್, ಹೆಸರು ಬದಲಾಯಿಸಿದರೆ ಏನಾಗುತ್ತೆ? ಡಿಕೆ ಶಿವಕುಮಾರ್ ಬದಲು ಸತ್ಯ ಹರಿಶ್ಚಂದ್ರ ಅಂತ ಹೆಸರಿಟ್ಕೊಂಡ್ರೆ ಸತ್ಯವಂತ ಆಗ್ತಾರಾ? ಎಂದು ಲೇವಡಿ ಮಾಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!