ಸ್ವಾಮೀಜಿಯಿಂದ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಹಿನ್ನಲೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು (Swamiji) ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಸದ್ಯ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ (POCSO case) ದಾಖಲಿಸಿ ಜೈಲಿಗಟ್ಟಿದ್ದಾರೆ.

ನಡೆದದ್ದೇನು?

ಮೇ 13ರಂದು ಮನೆಗೆ ಬಿಡುವುದಾಗಿ ಬಾಲಕಿಯನ್ನು ಸ್ವಾಮೀಜಿ ರಾಯಚೂರಿಗೆ ಕರೆದೊಯ್ದಿದ್ದಾರೆ. ಮೇ 13, 14ರಂದು ರಾಯಚೂರಿನಲ್ಲಿ ಎರಡು ದಿನ ಇದ್ದರು. ಬಳಿಕ ಮೇ 15ರಂದು ರಾತ್ರಿ ಬಾಗಲಕೋಟೆಯಲ್ಲಿ ವಾಸ್ತವ್ಯ ಹೂಡಿದ್ದರು. 2 ಕಡೆ ವಾಸ್ತವ್ಯ ಇದ್ದಾಗ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಯಾರ ಬಳಿಯಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ.

ಮೇ 16ರಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಸ್ವಾಮೀಜಿ ಬಿಟ್ಟು ಹೋಗಿದ್ದಾರೆ. ಈ ಬಗ್ಗೆ ಮೇ 17ರಂದು ಬಾಗಲಕೋಟೆ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಳಿಕ ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದಾರೆ.

ಇನ್ನು ಆರಾಮ ಇಲ್ಲದೇ ಇದ್ದಾಗ ಬಾಲಕಿಯ ತಂದೆ-ತಾಯಿಯೇ ಬಾಲಕಿಯನ್ನು ವಾರಗಟ್ಟಲೇ ಮಠದಲ್ಲೇ ಮಠದಲ್ಲಿ ಬಿಟ್ಟು ಹೋಗುತ್ತಿದ್ದರು. ಅದನ್ನೇ ಸ್ವಾಮೀಜಿ ದುರುಪಯೋಗ ಪಡಿಸಿಕೊಂಡಿದ್ದಾರೆ. ಮಠದಲ್ಲಿ ಸಾಕಷ್ಟು ಕಾನೂನು ಬಾಹಿರ ಚಟುವಟಿಕೆ ಮಾಡುತ್ತಿದ್ದ ಆರೋಪ ಕೂಡ ಇದೆ. 2021ರಲ್ಲಿ ಸ್ವಾಮೀಜಿಗೆ ಧರ್ಮದೇಟು ನೀಡಿ ಗ್ರಾಮಸ್ಥರು ಬುದ್ಧಿವಾದ ಹೇಳಿದ್ದರು. ಇದೀಗ ಅತ್ಯಾಚಾರ ಆರೋಪ ಹಿನಲ್ಲೆ ಸ್ವಾಮೀಜಿಯನ್ನು ಯಾವುದೇ ಕಾರಣಕ್ಕೂ ಬಿಡದಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!