
ಫಿಲಿಬಿತ್ನ ಹೆದ್ದಾರಿಯಲ್ಲಿ ಮರ ತುಂಬಿದ್ದ ಟ್ರಕ್ ಒಂದು ಟಾಟಾ ಏಸ್ಗೆ ಡಿಕ್ಕಿ ಹೊಡೆದಿದ್ದು, ಮತ್ತೊಂದು ಕಡೆಯಿಂದ ಬಂದ ಬೈಕ್ ಸವಾರನಿಗೂ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಇಡೀ ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬರ್ಖೇಡಾ ಪೊಲೀಸ್ ಠಾಣೆ ವ್ಯಾಪ್ತಿಯ ಜ್ಯೋರಾ ಕಲ್ಯಾಣಪುರದಲ್ಲಿ ಈ ಅವಘಡ ನಡೆದಿದ್ದು, ಭೀಕರ ಅಪಘಾತದಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲ. ಆದರೆ, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಟ್ರಕ್ನ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆರೋಪಿಗಾಗಿ ಬರ್ಖೇಡಾ ಠಾಣೆ ಪೊಲೀಸರು ತಲಾಶ್ ನಡೆಸುತ್ತಿದ್ದಾರೆ. ಸದ್ಯ ಘಟನೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.






