ಮಹಿಳೆಯೊಬ್ಬಳು ಸುಪಾರಿ ಕೊಟ್ಟು ಪತಿಯನ್ನೇ ಹತ್ಯೆ ಮಾಡಿಸಿದ ಘಟನೆ ಚಿಕ್ಕಮಗಳೂರಿನ ಎನ್ ಆರ್ ಪುರ ತಾಲೂಕಿನ ಕರಗುಂದ ಬಳಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಎನ್ ಆರ್ ಪುರ ಪಟ್ಟಣದ ಸುದರ್ಶನ್ ಎಂದು ಗುರುತಿಸಲಾಗಿದೆ. ಸುದರ್ಶನ್ ಪತ್ನಿ ಕಮಲ, ಆಕೆಯ ಪ್ರಿಯಕರ ಎಸ್ ಶಿವರಾಜ್ ಹಾಗೂ ಆತನ ಇನ್ನಿಬ್ಬರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.

10 ವರ್ಷಗಳ ಹಿಂದೆ ಕಮಲ ಸುದರ್ಶನ್ ರನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ಕಮಲಾ ಶಿವರಾಜ್ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ನಂತರ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಸುದರ್ಶನ್ ರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾಳೆ. ಹತ್ಯೆಗೂ ಮುನ್ನ ಕಮಲ ಪತಿಗೆ ನಿದ್ರೆ ಮಾತ್ರೆ ನೀಡಿ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!