ಕಾಮಿಡಿ ಕಿಲಾಡಿಗಳು (Comedy Kiladigalu) ಖ್ಯಾತಿಯ ಮಡೆನೂರು ಮನುಗೆ (Madenuru Manu) ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಬೆದರಿಕೆ ಆರೋಪಗಳ ಮೇಲೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಕೆಲ ದಿನಗಳ ಹಿಂದಷ್ಟೆ ಮಡೆನೂರು ಮನುವನ್ನು ಬಂಧಿಸಿದ್ದರು.

ಪೊಲೀಸರು ಎರಡು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದ್ದರು. ಎರಡು ದಿನಗಳ ತನಿಖೆ, ಮಹಜರು, ಹೇಳಿಕೆ ದಾಖಲು ಇತ್ಯಾದಿಗಳ ಬಳಿಕ ಇಂದು (ಮೇ 26) ಪೊಲೀಸರು ಮಡೆನೂರು ಮನುವನ್ನು 3ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲವು 14 ದಿನಗಳ ಕಾಲ ಮಡೆನೂರು ಮನುಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮನುವಿನ ಸಹನಟಿಯಾಗಿದ್ದ ಯುವತಿಯೊಬ್ಬರು ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದಾರೆ. ಅತ್ಯಾಚಾರ ಮಾತ್ರವೇ ಅಲ್ಲದೆ ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಬೆದರಿಕೆಗಳನ್ನು ಸಹ ಮನು ಹಾಕಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಮಡೆನೂರು ಮನು ನಟನೆಯ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾ ಬಿಡುಗಡೆ ಸಂದರ್ಭದಲ್ಲಿಯೇ ಯುವತಿ ದೂರು ದಾಖಲಿಸಿದ್ದರು. ದೂರು ದಾಖಲಾದ ಬೆನ್ನಲ್ಲೆ ಮಡೆನೂರು ಮನುವನ್ನು ಪೊಲೀಸರು ಬಂಧಿಸಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!