
ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯಪಾಲರು, ಕೃಷಿ ಸಚಿವರಿದ್ದ ಹೆಲಿಕಾಪಟರ್ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಕೃಷಿ ಸಚಿವ ಚೆಲುವರಾಯ ಸ್ವಾಮಿ ಹಾಗು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ನ್ನು ಬಳ್ಳಾರಿಯ ಜಿಂದಾಲ್ ನಲ್ಲಿ ತುರ್ತು ಭೂಸ್ಪರ್ಷ ಮಾಡಲಾಗಿದೆ. ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ 4 ನೇ ಘಟಿಕೋತ್ಸವಕ್ಕೆ ಇಬ್ಬರೂ ಬೆಂಗಳೂರಿನಿಂದ ತೆರಳುತ್ತಿದ್ದರು.
ಭಾರೀ ಮಳೆಯಿಂದಾಗಿ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಕೂಡಲೇ ಹೆಲಿಕ್ಯಾಪ್ಟರ್ ನ್ನು ಬಳ್ಳಾರಿಯಲ್ಲಿಯೇ ಇಳಿಸಲಾಗಿದೆ.






