
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.ಹಾಗಾಗಿ ಈ ಎರಡೂ ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೇ 27 ಮತ್ತು 28ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್ಸಿ, ಪದವಿಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.






