ಪುತ್ತೂರು :ಮುರ ಸಮೀಪ ಬೆಳಗಿನಜಾವ ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಮೇ 27 ರಂದು ನಡೆದಿದೆ.

ಘಟನೆಯ ವಿವರ:

ಮೂಲಗಳ ಪ್ರಕಾರ, ಈಶ್ವರ್ ಭಟ್ ಅಂಡೆಪುನಿ ಅವರ ಮನೆಯಲ್ಲಿ ಇಂದು ಶ್ರಾದ್ಧ ಕಾರ್ಯಕ್ರಮವಿತ್ತು. ಇದರಲ್ಲಿ ಭಾಗವಹಿಸಲು ಅವರ ಮಗಳು ಅಪೂರ್ವ ಹಾಗೂ ಮೊಮ್ಮಗಳು ಬೆಂಗಳೂರಿನಿಂದ ಪುತ್ತೂರಿಗೆ ಆಗಮಿಸಿದ್ದರು. ಈಶ್ವ‌ರ್ ಭಟ್ ಅವರು ಪುತ್ತೂರು ಪೇಟೆಯಿಂದ ಇವರನ್ನು ತಮ್ಮ ವ್ಯಾಗನ‌ರ್ ಕಾರಿನಲ್ಲಿ ಮನೆಗೆ ಕರೆತರುತ್ತಿದ್ದ ವೇಳೆ, ಮುರ ಜಂಕ್ಷನ್ ಬಳಿ ಕಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತ ನಡೆದ ಕೂಡಲೇ, ಅದೇ ಮಾರ್ಗವಾಗಿ ಹಾಲು ವಿತರಿಸಿ ಹಿಂತಿರುಗುತ್ತಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ಹಾಗೂ ಇತರ ಸ್ಥಳೀಯರು ತಕ್ಷಣ ಕಾರ್ಯಪ್ರವೃತ್ತರಾಗಿ, ನಜ್ಜುಗುಜ್ಜಾಗಿದ್ದ ಕಾರಿನಿಂದ ಗಾಯಾಳುಗಳನ್ನು ಹೊರತೆಗೆದಿದ್ದಾರೆ. ಕಾರಿನ ಬಾಗಿಲು ತೆರೆಯಲು ಕಬ್ಬಿಣದ ಸಲಾಕೆಯನ್ನೂ ಬಳಸಬೇಕಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!