
ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣ ಸಂಬಂಧ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಬ್ದುಲ್ ರಹಿಮಾನ್ ಅವರ ಕೊಲೆ ಮತ್ತು ಕಲಂದರ್ ಶಾಫಿ ಕೊಲೆಯತ್ನ ಪ್ರಕರಣದಲ್ಲಿ ಪ್ರಮುಖ ಆರೋಪಿ ಸ್ಥಳೀಯ ಪರಿಚಯಸ್ಥರಾದ ದೀಪಕ್ ಮತ್ತು ಸುಮೀತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಅಬ್ದುಲ್ ರಹಿಮಾನ್ ಮತ್ತು ಕಂದರ್ ಶಾಫಿ ಅವರು ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಮರಳನ್ನು ಇಳಿಸುವ ಸಂದರ್ಭಸ್ಥಳೀಯರಾದ ದೀಪಕ್, ಸಮೀತ್ ಮತ್ತು 15 ಮಂದಿ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್ ಗಳಿಂದ ತಿವಿದು, ಕಡಿದರು, ಆಗ ಪಕ್ಕದಲ್ಲಿದ್ದ ನಾನು ತಡೆಯಲು ಹೋದಾಗ ಚೂರಿಯಿಂದ, ಎದೆಗೆ, ಬೆನ್ನಿಗೆ, ಕೈಗೆ, ತಿವಿದು ತಲವಾರ್ ನಿಂದ ಕಡಿದಿರುತ್ತಾರೆ. ಇದ್ದನ್ನು ಕಂಡು ಅಲ್ಲಿ ಜನ ಸೇರಿ ಬೊಬ್ಬೆ ಹಾಕಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಪರಾರಿಯಾಗಿದ್ದಾರೆ. ಹಲ್ಲೆಗೈದ ಪೈಕಿ ಇಬ್ಬರು ಸ್ಥಳೀಯ ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಲಂದರ್ ಶಾಫಿ ಮಾಹಿತಿ ನೀಡಿದ್ದಾರೆ ಎಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ಮುಹಮ್ಮದ್ ನಿಸಾರ್ ಎಂಬವರು ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ






