
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಬಹಳ ನೋವಿನ ಸಂಗತಿ. ಪೊಲೀಸರಿಗೆ ಕೊಲೆ ಆರೋಪಿಗಳ ಪ್ರಾಥಮಿಕ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಬಂಧಿಸುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ದಕ್ಷಿಣ ಕನ್ನಡದಲ್ಲಿ ಕೋಮುವಾದದ ಕೆಟ್ಟ ವಾತಾವರಣ ನಿರ್ಮಾಣ ಆಗಿದೆ.
ಅಮಾನವೀಯವಾಗಿ, ಬರ್ಬರವಾಗಿ ಹತ್ಯೆ ಮಾಡಿರುವುದು ಇಡೀ ಸಮಾಜಕ್ಕೆ ಕೆಟ್ಟ ಸಂದೇಶ. ಎಲ್ಲಾ ರೀತಿಯ ಕಟ್ಟೆಚ್ಚರವನ್ನು ಪೊಲೀಸರು ವಹಿಸಿದ್ದಾರೆ. ಬಿಜೆಪಿಯವರ ತರ ಪ್ರಚೋಧನಾಕಾರಿಯಾಗಿ ಮಾತನಾಡಲ್ಲ. ಅ ತರ ಜನ ನಾವಲ್ಲ. ಅವರ ಬಾಯಿಗೆ ಲಂಗು ಲಗಾಮಿಲ್ಲ. ಬಿಜೆಪಿ ಹಾಗೂ ಸಂಘ ಪರಿವಾರದ ನಾಯಕರು ಶವ ಸಿಕ್ಕರೂ ಅದರ ಮೇಲೆ ರಾಜಕೀಯ ಮಾಡುತ್ತಾರೆ ಎಂದು ಟೀಕಿಸಿದರು.






