ಬಂಟ್ವಾಳದ ಕಾಂಬೋಡಿ ಇರಾಕೋಡಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಅವರ ಮೃತದೇಹವನ್ನು ಮೇ 28ರ ಬುಧವಾರ ಉಳ್ಳಾಲದಿಂದ ಕೊಳತ್ತಮಜಲಿನವರೆಗೆ ಮೆರವಣಿಗೆಯಲ್ಲಿ ಸಾಗಿಸಿ ಬಳಿಕ ಕೊಳತ್ತಮಜಲು ಮಸೀದಿಯಲ್ಲಿ ದಫನ ಕಾರ್ಯ ನಡೆಸಲಾಯಿತು.

ಮೃತದೇಹ ಬಿ.ಸಿ.ರೋಡಿಗೆ ಆಗಮಿಸುತ್ತಿದ್ದಂತೆ ಸಹಸ್ರಾರು ಸಂಖ್ಯೆಯ ಮುಸ್ಲಿಂ ಸಮುದಾಯದವರು ಜಮಾಯಿಸಿದ್ದರು. ಮನೆಯ ಬಳಿಯೂ ಹೆಚ್ಚಿನ ಸಂಖ್ಯೆಯ ಜನರು ಸೇರಿದ್ದರು.

ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಘಟನೆಯ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನಲ್ಲಿ ಹೆಚ್ಚಿನ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಪೇಟೆಯಲ್ಲಿ ಜನಸಂಚಾರವೂ ವಿರಳವಾಗಿತ್ತು.

Leave a Reply

Your email address will not be published. Required fields are marked *

Join WhatsApp Group
error: Content is protected !!