ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ ಹಾಗೂ ಕೋಮುಸೌಹಾರ್ದತೆ ಕದಡುವಂತಹ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ‘ಆಯಂಟಿ ಕಮ್ಯುನಲ್ ವಿಂಗ್’ ಜಾರಿಗೆ ಆದೇಶ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ದಕ್ಷಿಣ ಕನ್ನಡದಲ್ಲಿ ಈಗಾಗಲೇ ಆಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ರಚನೆಯಾಗಿದ್ದು, ಆಯಂಟಿ ಕಮ್ಯುನಲ್ ವಿಂಗ್ ಜಾರಿಗೆ ಆದೇಶ ನೀಡಲಾಗಿದೆ. ಪ್ರತಿಬಾರಿ ಘಟನೆ ನಡೆದಾಗಲೂ ಕಣ್ಮುಚ್ಚಿ ಕುಳಿತುಗೊಳ್ಳಲ್ಲ. ಕಳೆದ ಬಾರಿ ಹತ್ಯೆ ಘಟನೆ ನಡೆದಾಗ ನಾನು ಅಲ್ಲಿಗೆ ಹೋಗಿದ್ದೆ. ಆಗಲೇ ಆಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ರಚನೆ ಬಗ್ಗೆ ಹೇಳಿದ್ದೆ. ಇದೀಗ ಆಯಂಟಿ ಕಮ್ಯುನಲ್ ವಿಂಗ್ ತಕ್ಷಣ ಜಾರಿಗೊಳಿಸಾಲಾಗಿದೆ ಎಂದು ತಿಳಿಸಿದರು.

ಮಂಗಳೂರಿನಲ್ಲಿ ನಡೆದಿರುವ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶ ಎಂದು ಪರಿಗಣಿಸಿದ್ದು, ಕೋಮುಗಲಭೆ, ಕಾನೂನು ಸುವ್ಯವಸ್ಥೆ ಹದಗೆಡಿಸುವ ಘಟನೆ ನಡೆದಲ್ಲಿ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು. ಯಾವ ರೀತಿ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂಬುದನ್ನು ಹೇಳಿ ಕೈಗೊಳ್ಳುವ ಅಗತ್ಯವಿಲ್ಲ. ಯಾವುದೇ ಘಟನೆಗಳಿಗೆ ಅವಕಾಶವನ್ನು ನೀಡಲ್ಲ ಎಂದು ಎಚ್ಚರಿಕೆ ನೀಡಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!