
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಶುಕ್ರವಾರ ನಿರ್ಗಮನ ಎಸ್ಪಿ ಯತೀಶ್ ಎನ್. ಅವರಿಂದ ಅಧಿಕಾರ ಸ್ವೀಕರಿಸಿದರು.
ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು, ಮತೀಯ ಪ್ರಕರಣ, ಗೂಂಡಾಗಿರಿ ಪ್ರಕರಣಗಳ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು. ರೌಡಿ ಶೀಟರ್ ಗಳ ಚಲನವಲನಗಳ ಬಗ್ಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು ಎಂದರು.
ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧ ಪ್ರಕರಣಗಳ ನಿಯಂತ್ರಮಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.
ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ಮುಕ್ತವಾಗಿ ನನ್ನ ಮೊಬೈಲ್ ಸಂಖ್ಯೆ: 9480805301 ಅಥವಾ ಕಛೇರಿಗೆ ಸಂಖ್ಯೆ: 0824-2220503ಗೆ ಮಾಹಿತಿ ನೀಡಬಹುದು ಎಂದು ಮಾಧ್ಯಮ ಪ್ರಕಟಣೆ ಯಲ್ಲಿ ತಿಳಿದ್ದಾರೆ






