
ಬಂಟ್ವಾಳ: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಅಬ್ದುಲ್ ರಹೀಂ ಅವರ ಕೊಳತ್ತಮಜಲು ಮನೆಗೆ ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೂಡಲೇ, ಈ ಹತ್ಯೆಯ ತನಿಖೆಗಾಗಿ, ಐಪಿಎಸ್ ಅಧಿಕಾರಿಯ ನೇತೃತ್ವದಲ್ಲಿ ಎಸ್‌ಐಟಿ ರಚಿಸಬೇಕು, ಬಜ್ಜೆಯಲ್ಲಿ ಕೋಮು ದ್ವೇಷದ ಭಾಷಣ ಮಾಡಿ ಕೊಲೆಗೆ ಪ್ರಚೋದನೆ ನೀಡಿದವರನ್ನು, ಈ ಹತ್ಯೆಯ ಆರೋಪಿಗಳನ್ನಾಗಿಸಬೇಕು. ಅಬ್ದುಲ್ ರಹೀಂ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು, ಕೊಲೆ ಯತ್ನ ಪ್ರಯತ್ನದಿಂದ, ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿರುವ, ಕಲಂದರ್ ಶಾಪಿ ರವರ ಆಸ್ಪತ್ರೆಯ ಖರ್ಚನ್ನು ಸರ್ಕಾರ ಭರಿಸಬೇಕು, 10 ಲಕ್ಷ ಪರಿಹಾರ ಅವರ ಕುಟುಂಬ ವರ್ಗಕ್ಕೆ ನೀಡಬೇಕು ಎಂದು ಆಗ್ರಹಿಸಿದರು.






