ನೇಣು ಬಿಗಿದುಕೊಂಡು ಮತ್ತೊರ್ವ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಗುರುವಾರ ರಾತ್ರಿ ನಡೆದಿದೆ.

ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಸಿಇಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್ (20) ಎಂದು ಗುರುತಿಸಲಾಗಿದೆ.

ಗುರುವಾರ ರಾತ್ರಿ ತನ್ನ ಮನೆಯಲ್ಲೇ ಈತ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾನೆ.

ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ಹಳ್ಳಿಗಟ್ಟು ಎಂಬಲ್ಲಿ ನಡೆದಿದೆ.ಸಿಐಟಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ತೇಜಸ್ವಿನಿ (19) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಾಸ್ಟೆಲ್ ನಲ್ಲಿ ತಂಗಿದ್ದ ವಿದ್ಯಾರ್ಥಿನಿ ಸೂಸೈಡ್ ಮಾಡಿಕೊಂಡಿದ್ದು, ಡೆತ್ ನೋಟ್ ಪತ್ತೆಯಾಗಿದೆ. 6 ವಿಷಯ ಬ್ಯಾಕ್ ಲಾಗ್ ಇರುವ ಕಾರಣ ಸೂಸೈಡ್ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿದ್ದಾಳೆ.
ರಾಯಚೂರು ಮೂಲದ ವಿದ್ಯಾರ್ಥಿನಿ ತೇಜಸ್ವಿನಿಗೆ ಓದಲು ಆಸಕ್ತಿ ಇರಲಿಲ್ಲ, ಅಲ್ಲದೇ 6 ಬ್ಯಾಕ್ ಲಾಗ್ ಉಳಿದಿತ್ತು ಎನ್ನಲಾಗಿದೆ. ಈ ಹಿನ್ನೆಲೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!