ಬೆಳ್ತಂಗಡಿ :ಸಾಮಾಜಿಕ ಜಾಲತಾಣವಾದ Instagram
“mangalore_beary_warrior_03” ໖໐໙ ಪೇಜ್ ನಲ್ಲಿ ವ್ಯಕ್ತಿಯೋರ್ವನು ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳ ಭಾವಚಿತ್ರವನ್ನು ಹೊಂದಿರುವ ಪೋಸ್ಟ್ ಹಾಕಿ, ಅದರೊಂದಿಗೆ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವಂತಹ ಸಂದೇಶವನ್ನು ಬರೆದಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿತನ ವಿರುದ್ದ ದಿನಾಂಕ: 01.06.2025 ರಂದು ಬೆಳ್ತಂಗಡಿ ಠಾಣೆಯಲ್ಲಿ ಅಕ್ರ ನಂ : 41/2025 ಕಲಂ: 55,103,353(2) ໖໖ 2 2023 3 ದಾಖಲೀಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಸಾಮಾಜಿಕ ಜಾಲತಾಣವಾದ Instagram ನ bantwal_hindu_warriors ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವಂತಹ ಹಾಗೂ ಕೋಮು ಸೌಹಾರ್ದತೆಯನ್ನು ಹಾಳುಗೆಡವುವಂತಹ ಪೋಸ್ಟ್ ಪ್ರಸಾರ ಮಾಡಿರುವುದಾಗಿದೆ. ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಈ ಬಗ್ಗೆ ದಿನಾಂಕ: 01.06.2025 ರಂದು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

196(1)(2), 353(1) (2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು.

Leave a Reply

Your email address will not be published. Required fields are marked *

Join WhatsApp Group
error: Content is protected !!