ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಎಲ್ಲ ಐವರು ಆರೋಪಿಗಳನ್ನು ಪೊಲೀಸರು ತಮ್ಮ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಪ್ರಕರಣದಲ್ಲಿ ಕೂರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರ ನಿವಾಸಿಗಳಾದ ಪೃಥ್ವಿರಾಜ್ (21), ಚಿಂತನ್ (19), ತೆಂಕಬೆಳ್ಳೂರು ನಿವಾಸಿ ಸುಮಿತ್ ಆಚಾರ್ಯ (27) ಹಾಗೂ ಬಡಗಬೆಳ್ಳೂರಿನ ರವಿರಾಜ್(23) ಬಂಧಿತ ಆರೋಪಿಗಳಾಗಿದ್ದು, ಅವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದ್ದು, ಹತ್ಯೆಯ ಹಿಂದೆ ಯಾರ್ಯಾರಿದ್ದಾರೆ ಎಂಬ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಇನ್ನೂ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯ ಕುರಿತು ಪೊಲೀಸ್ ಮೂಲಗಳು ತಿಳಿಸಿವೆ.














