ಪುತ್ತೂರು :ಅರುಣ್ ಕುಮಾರ್ ಪುತ್ತಿಲ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ಜೂನ್ 06ರಂದು ನಿಗದಿಪಡಿಸಿದ್ದು,  ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ.

ಈ ಪ್ರಕರಣದಲ್ಲಿ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ. ತಪ್ಪಿದಲ್ಲಿ ಪ್ರಕರಣದಲ್ಲಿ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ರಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅರುಣ್ ಪುತ್ತಿಲ ಗಡಿಪಾರು ನೋಟಿಸ್ನಲ್ಲೇನಿದೆ?

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕೃಷ್ಣಯ್ಯ ಎಂಬವರ ಮಗ ಆರುಣ್ ಕುಮಾರ್ ಪುತ್ತಿಲ ಎಂಬಾತನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ದಿನಾಂಕ: 06-06-2025 ರಂದು ನಿಗದಿಪಡಿಸಲಾಗಿದೆ. ಸದ್ರಿ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೀಡಿರುವ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.

‘ಈ ಪ್ರಕರಣದಲ್ಲಿ ನೀವು (ಪುತ್ತಿಲ) ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ನಿಮಗೆ ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸಹ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ಭಾಷಣ ಮಾಡುವವರ ಹಾಗೂ ಕೋಮು ಪ್ರಚೋದನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಖಡನ್ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಹಿಂದು ಮುಖಂಡರ ವಿರುದ್ಧ ಕ್ರಮ ಆರಂಭವಾಗಿದೆ. ಆದರೆ, ಅರುಣ್ ಪುತ್ತಿಲಗೆ ಯಾವ ಕಾರಣಕ್ಕೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂಬುದನ್ನು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೋಟಿಸ್ನಲ್ಲಿ ಉಲ್ಲೇಖಿಸಿಲ್ಲ.

Leave a Reply

Your email address will not be published. Required fields are marked *

Join WhatsApp Group
error: Content is protected !!