
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಜಪೆ ನಿವಾಸಿ ಅಬ್ದುಲ್ ರಜಾಕ್ ಎಂಬಾತನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ.ಮೇ 1ರಂದು ಬಜಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ನಡೆದಿತ್ತು.
ಆರೋಪಿ ಅಬ್ದುಲ್ ರಜಾಕ್ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ್ದ.
ಈತ ಪ್ರಕರಣದಲ್ಲಿ ಈಗಾಗಲೇ ಬಂಧನದಲ್ಲಿರುವ ಮೊಹಮ್ಮದ್ ಮುಜಾಂಮ್ಮಿಲ್ ನ ತಂದೆ. ಮತ್ತೋರ್ವ ಆರೋಪಿ ನೌಷದ್ ವಾಮಂಜೂರು ಅಲಿಯಾಸ್ ಚೊಟ್ಟೆ ನೌಷದ್ ಈತನ ಮಗಳ ಗಂಡ. ಇವರಿಬ್ಬರು ಹಾಗೂ ಇತರ ಆರೋಪಿಗಳ ಜೊತೆ ಸೇರಿ ತನ್ನ ಮನೆಯಲ್ಲಿ ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಯು ತಲೆ ಮರೆಸಿಕೊಳ್ಳಲು ಸಹಕರಿಸಿದ್ದ.
ಈ ಕೊಲೆ ಪ್ರಕರಣದ ತನಿಖೆಯು ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.






