ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡಿದ ಆರೋಪದಲ್ಲಿ 6 ಮಂದಿ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಹೆಜಮಾಡಿಯ ಅಸ್ಲಾಂ (23), ಕಾಟಿಪಳ್ಳದ ಚೇತನ್ (20), ಹಳೆಯಂಗಡಿ ನಿತಿನ್ ಅಡಪ (23), ಫರಂಗಿಪೇಟೆಯ ರಿಯಾಝ್ ಇಬ್ರಾಹೀಂ (30), ಕಸಬಾ ಬೆಂಗ್ರೆಯ ಜಮಾಲ್‌ ಝಕೀರ್(21) ಮತ್ತು ಕೊಳವೈಲ್‌ನ ಗುರುಪ್ರಸಾದ್‌ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ಅಸ್ಲಾಂ ಎಂಬಾತನು ಸೌದಿ ಅರೇಬಿಯಾದಿಂದ team_jokerzzz._ ಎಂಬ ಇನ್‌ಸ್ಟಾಗ್ರಾಂ ಮೂಲಕ ಪ್ರಚೋದನಾಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪದಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಕಲಂ.192, 353 (2)ರಂತೆ ಪ್ರಕರಣ ದಾಖಲಾಗಿತ್ತು. ಆರೋಪಿ ಅಸ್ಲಾಂ ವಿರುದ್ಧ ಎಲ್‌ಒಸಿ ಹೊರಡಿಸಿ, ದಸ್ತಗಿರಿ ಮಾಡಲಾಗಿದೆ

Leave a Reply

Your email address will not be published. Required fields are marked *

Join WhatsApp Group
error: Content is protected !!