ಬೈಕ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ ಕಿನ್ನಿಮುಲ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತ ಸವಾರನನ್ನು ಭಜನೆ ಹಾಡುಗಾರ ಮತ್ತು ತಬಲ ವಾದಕ ಕಿದಿಯೂರಿನ ಸಂಕೀರ್ತನ್ (28) ಎಂದು ಗುರುತಿಸಲಾಗಿದೆ.

ಕುಂದಾಪುರದಿಂದ ಮಂಗಳೂರು ಕಡೆಗೆ ರಾಷ್ಟ್ರೀಯ ಹೆದ್ದಾರಿ – 66ರಲ್ಲಿ ಸಾಗುತ್ತಿದ್ದ ಕಾರನ್ನು ಅದರ ಚಾಲಕ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಗೂಡ್ಸ್ ವಾಹನವೊಂದಕ್ಕೆ ಮತ್ತು ಅದರ ಹಿಂದೆ ಸಾಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದ.

ಕಾರನ್ನು ರಸ್ತೆ ವಿಭಾಜಕಕ್ಕೆ ಹತ್ತಿಸಿ ವಿರುದ್ಧ ದಿಕ್ಕಿನಲ್ಲಿ ಗೂಡ್ಸ್ ವಾಹನಕ್ಕೆ ಡಿಕ್ಕಿಯಾಗಿದ್ದರಿಂದ ಮೂವರು ಗಾಯಗೊಂಡಿದ್ದರು. ಬಳಿಕ ಕಾರು ಬೈಕ್‌ಗೆ ಡಿಕ್ಕಿ ಹೊಡೆಯಿತು. ಬೈಕ್‌ ಸವಾರ ಸಂಕೀರ್ತನ್ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ. ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಸ್ತುತ ಅವರು ಮೂಡುಬಿದಿರೆ ಆಳ್ವಾಸ್‌ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ಎಂಬಿಎ ವಿದ್ಯಾರ್ಥಿಯಾಗಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!