ಹಿಂದೂಪರ ಸಂಘಟನೆಗಳ ಕಾರ್ಯಕರ್ತ ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಪ್ರಕಣವನ್ನು ಕೇಂದ್ರ ಗೃಹ ಇಲಾಖೆ ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ಒಪ್ಪಿಸಿದೆ.

ಈ ಕುರಿತು ಇಂದು ಕೇಂದ್ರ ಗೃಹ ಇಲಾಖೆ ಆದೇಶ ಮಾಡಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ಎಕ್ಸ್ ಪೋಸ್ಟ್ ಮಾಡಿದೆ.

ಹಿಂದುತ್ವಪರ ಕಾರ್ಯಕರ್ತ ಸುಹಾಸ್‌ ಶೆಟ್ಟಿಯನ್ನು ದುಷ್ಕರ್ಮಿಗಳ ತಂಡವು ಬಜಪೆಯ ಕಿನ್ನಿಪದವಿನಲ್ಲಿ ಮೇ 1ರಂದು ತಲವಾರಿನಿಂದ ಕೊಚ್ಚಿ ಹತ್ಯೆ ಮಾಡಿತ್ತು.

ಮಂಗಳೂರು ಪೊಲೀಸ್‌ನ ಸಿಸಿಬಿ ಘಟಕ ಈ ಪ್ರಕರಣದ ತನಿಖೆ ನಡೆಸುತ್ತಿತ್ತು. ಸಿಸಿಬಿ ಈ ಪ್ರಕರಣದಲ್ಲಿ ಒಟ್ಟು 12 ಆರೋಪಿಗಳನ್ನು ಬಂಧಿಸಿತ್ತು.

ಬಜಪೆಯ ಸುಹಾಸ್ ಶೆಟ್ಟಿ ವಿರುದ್ಧ ಎರಡು ಕೊಲೆ ಪ್ರಕರಣಗಳೂ ಸೇರಿದಂತೆ ಐದು ಪ್ರಕರಣಗಳು ದಾಖಲಾಗಿದ್ದವು.

Leave a Reply

Your email address will not be published. Required fields are marked *

Join WhatsApp Group
error: Content is protected !!