
ಐ ಪಿಎಲ್‌ನಲ್ಲಿ ಅತಿ ದೊಡ್ಡ ಫ್ರಾಂಚೈಸಿಗಳೊಂದು ರಾಯಲ್ ಚಾಲೆಂಜೆರ್ಸ್ ಬೆಂಗಳೂರು. ಅತಿ ಹೆಚ್ಚು ಫ್ಯಾನ್ಸ್ ಹೊಂದಿರುವ ಆರ್‌ಸಿಬಿ ಈ ಬಾರಿ ಚಾಂಪಿಯನ್ ಟ್ರೋಫಿಗೆ ಮುತ್ತಿಟ್ಟಿದೆ.
ಈ ನಡುವೆ ಚಿಬೆಂಗಳೂರು ರಾಯಲ್ ಚಾಲೆಂಜೆರ್ಸ್ ಸದ್ಯ ಅಮೆರಿಕಾದ ಮೂಲದ ಕಂಪನಿ ಒಡೆತನದಲ್ಲಿದೆ. ಆ ಕಂಪನಿ ಆರ್ ಸಿಬಿ ಸೇಲ್ ಮಾಡುತ್ತಿರುವ ಸುದ್ದಿ ನಿನ್ನೆಯಿಂದ ಕಾಡ್ಗಿಚ್ಚಿನಂತೆ ಹಬ್ಬಿತ್ತು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರ್ ಸಿಬಿ ಕೊಂಡುಕೊಳ್ಳಲಿದ್ದಾರೆ ಎಂಬ ಬಿಸಿ ಚರ್ಚೆ ರಾಜಕೀಯ ಪಡಸಾಲೆಗಳಲ್ಲಿ ಹರಿದಾಡಿತ್ತು. ಇದಕ್ಕೆ ಸ್ವತಃ ಡಿಕೆ ಉತ್ತರ ಕೊಟ್ಟಿದ್ದಾರೆ.
ದೆಹಲಿಯಲ್ಲಿ ಈ ಬಗ್ಗೆ ಮಾತನಾಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್,”ನಾನು ಹುಚ್ಚನಲ್ಲ. ನಾನು ಚಿಕ್ಕಂದಿನಿಂದಲೂ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್‌ನ ಸದಸ್ಯ, ಅಷ್ಟೇ. ನನಗೆ ಸಮಯವಿಲ್ಲ, ಆದರೂ ನಿರ್ವಹಣೆಯ ಭಾಗವಾಗಲು ನನಗೆ ಆಫರ್‌ಗಳು ಬಂದವು… ನನಗೆ ಆರ್‌ಸಿಬಿ ಏಕೆ ಬೇಕು? ನಾನು ರಾಯಲ್ ಚಾಲೆಂಜ್ ಕುಡಿಯುವುದೇ ಇಲ್ಲ” ಆರ್‌ಸಿಬಿ ಫ್ರಾಂಚೈಸಿಯನ್ನು ಖರೀದಿಸುವ ವದಂತಿಗಳನ್ನು ನಿರಾಕರಿಸಿದ್ದಾರೆ






