242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್ ನ ಅಹಮದಾಬಾದ್ ನ ಏರ್ ಪೋರ್ಟ್ ಬಳಿ ಪತನಗೊಂಡಿರುವ ಘಟನೆ ಬೆನ್ನಲ್ಲೇ ಅಹಮದಾಬಾದ್ ಏರ್ ಪೋರ್ಟ್ ನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.

ಅಹಮದಾಬಾದ್ ಏರ್ ಪೋರ್ಟ್ ನಿಂದ ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ 5 ನಿಮಿಷಗಳಲ್ಲೇ ಕ್ಷಣಗಳಲ್ಲೇ ಮರಕ್ಕೆ ಡಿಕ್ಕಿ ಹೊಡೆದು, ಕಟ್ಟಡಕ್ಕೆ ಗುದ್ದಿ, ನೆಲಕ್ಕೆ ಅಪ್ಪಳಿಸಿದೆ.

ನೆಲಕ್ಕೆ ಅಪ್ಪಳಿಸುತ್ತಿದ್ದಂತೆ ವಿಮಾನದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಧಗ ಧಗನೆ ಹೊತ್ತಿ ಉರಿದಿದೆ. ಘಟನಾ ಸ್ಥಳದಲ್ಲಿ ಪ್ರಯಾಣಿಕರ, ಸಿಬ್ಬಂದಿಗಳ ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ.

ಏರ್ ಇಂಡಿಯಾ ವಿಮಾನ ಪತನಗೊಂಡಿರುವ ಬೆನ್ನಲ್ಲೇ ಅಹಮದಾಬಾದ್ ಏರ್ ಪೋರ್ಟ್ ನ್ನು ಕೆಲ ಸಮಯದವರೆಗೆ ಬಂದ್ ಮಾಡಲಾಗಿದೆ. ಏರ್ ಇಂಡಿಯಾದ ಎಲ್ಲಾ ವಿಮಾನಗಳ ಟೇಕಾಫ್, ಲ್ಯಾಂಡಿಂಗ್ ಸ್ಥಗಿತಗೊಳಿಸಲಾಗಿದೆ. ಸಂಜೆ 5 ಗಂಟೆಯವರೆಗೆ ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!