
ಅಹಮದಾಬಾದ್: ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಗುರುವಾರ (ಜೂನ್ 12) ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಾನಿ ನಗರ ಪ್ರದೇಶದಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು. ವಿಮಾನದಲ್ಲಿ 12 ಸಿಬ್ಬಂದಿ (ಇಬ್ಬರು ಪೈಲಟ್‌ಗಳು ಸೇರಿದಂತೆ) ಸೇರಿದಂತೆ ಒಟ್ಟು 242 ಜನರಿದ್ದರು.
ಈ ಮಹಾದುರಂತದಲ್ಲಿ ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದರು ಎಂದು ಹೇಳಲಾಗಿತ್ತು. ಆದರೆ ಪವಾಡಸದೃಶ ಓರ್ವ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ Al 171 ನ ಸೀಟ್ ನಂ 11ಎ ನಲ್ಲಿ ಕುಳಿತಿದ್ದ ರಮೇಶ್ ಕುಮಾರ್ ಎಂಬುವವರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಸದ್ಯ ಗಂಭೀರವಾಗಿ ಗಾಯಗೊಂಡಿರುವ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ.






