ಗುಜರಾತ್‌ನ ಅಹಮದಾಬಾದ್‌ನಲ್ಲಿ ನಿನ್ನೆ ಪತನವಾದ ಏರ್ ಇಂಡಿಯಾ ವಿಮಾನದ ಅವಶೇಷಗಳಿಂದ ಡಿಜಿಟಲ್ ವಿಡಿಯೋ ರೆಕಾರ್ಡರ್ (DVR) ಪತ್ತೆಯಾಗಿದೆ. ಇಲ್ಲಿಯವರೆಗೆ ವಿಮಾನ ಅಪಘಾತಕ್ಕೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಇದೀಗ ಡಿವಿಆರ್‌ ಪತ್ತೆಯಾಗಿರುವುದರಿಂದ ಅಪಘಾತಕ್ಕೆ ಸಂಬಂಧಿಸಿದ ಅಗತ್ಯ ಮಾಹಿತಿಗಳು ಇದರಲ್ಲಿ ದಾಖಲಾಗಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹೊರಟು ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾದ ಬೋಯಿಂಗ್ ಡ್ರೀಮ್‌ಲೈನರ್‌ನ ಅವಶೇಷಗಳು ಜಿಲ್ಲಾ ಆಸ್ಪತ್ರೆಯ ಬಳಿ ಪತ್ತೆಯಾಗಿವೆ. ತನಿಖೆಯಲ್ಲಿ ಭಾಗಿಯಾಗಿರುವ ಎಟಿಎಸ್‌ ತಂಡದ ಅಧಿಕಾರಿಯೊಬ್ಬರು ವಿಮಾನದಲ್ಲಿ ಡಿವಿಆರ್‌ ಅನ್ನು ಪತ್ತೆಹಚ್ಚಿದ್ದಾರೆ. ಇದು ಘಟನೆಯ ತನಿಖೆಯನ್ನು ತ್ವರಿತಗೊಳಿಸಲು ಸಹಾಯ ಮಾಡಲಿದೆ.

ಅಹಮದಾಬಾದ್ ವಿಮಾನ ಅಪಘಾತದ ಪರಿಣಾಮವಾಗಿ ಒಟ್ಟು 297 ವ್ಯಕ್ತಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ವಿಮಾನದಲ್ಲಿದ್ದ 242 ಜನರಲ್ಲಿ 241 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ. ಇದರ ಜೊತೆಗೆ 56 ಹೆಚ್ಚುವರಿ ಸಾವುಗಳು ವಸತಿ ಪ್ರದೇಶದಲ್ಲಿ ಸಂಭವಿಸಿದೆ.

ಈ ಘಟನೆಯ ತನಿಖೆ ನಡೆಸಲು ಉನ್ನತ ಮಟ್ಟದ ತಂಡವನ್ನು ರಚಿಸಲಾಗಿದೆ. ವಿಮಾನದ ಡಿವಿಆರ್‌ ಪತ್ತೆಗೂ ಮೊದಲು ವಿಮಾನದ ಕಪ್ಪು ಪೆಟ್ಟಿಗೆಯನ್ನು ಸಹ ವಶಪಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!