
ಚಾರ್ ಧಾಮ್ ಯಾತ್ರಿಕರು ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ಒಂದು ಅಪಘಾತಕ್ಕೀಡಾಗಿದ್ದು, ಐವರು ಯಾತ್ರಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗೌರಿಕುಂಡ್ ಪ್ರದೇಶದಲ್ಲಿ ನಡೆದಿದೆ. ಭಾನುವಾರ ಮುಂಜಾನೆ ಗೌರಿಕುಂಡ್ ದಿಂದ ಘಾಟಾ ಪ್ರದೇಶಕ್ಕೆ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಆರ್ಯನ್ ಅವಿಯೇಷನ್ ಕಂಪನಿಗೆ ಸೇರಿದ ವಿಮಾನ 6 ಮಂದಿ ಪ್ರಯಾಣಿಕರನ್ನು ಗುಪ್ತಕಾಶಿಗೆ ಹೊತ್ತು ತೆರಳುತ್ತಿದ್ದು, ಈ ವೇಳೆ ಗೌರಿಕುಂಡ್ ಬಳಿ ಇಂದು ಬೆಳಗಿನ ಜಾವ 5.30ರ ಸುಮಾರಿಗೆ ಪತವಾಗಿದೆ.
ಹವಾಮಾನ ವೈಪರೀತ್ಯದಿಂದಾಗಿ ದುರ್ಘಟನೆ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.
ಹೆಲಿಕಾಪ್ಟರ್ ಪತನವನ್ನು ಹೆಲಿಕಾಪ್ಟರ್ ನೋಡಲ್ ಅಧಿಕಾರಿ ರಾಹುಲ್ ಚೌಬೆ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್ವರ್ ಅವರು ದೃಢಪಡಿಸಿದ್ದಾರೆ.
ಘಟನೆ ವೇಳೆ ಹೆಲಿಕಾಪ್ಟರ್ ನಲ್ಲಿ ಪೈಲಟ್ ಸೇರಿ ಒಟ್ಟು 7 ಮಂದಿ ಇದ್ದರು ಎನ್ನಲಾಗಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.






