
ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ರಣಭೀಕರ ಮಳೆಗೆ ತತ್ತರಿಸಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು(16) ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ






