
ನೆಲ್ಯಾಡಿ: ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, 18ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ಪಡುಮನೆ ನಿವಾಸಿ ಶಂಕರನಾರಾಯಣ ಭಟ್ (41) ಮೃತಪಟ್ಟ ದುರ್ದೈವಿ.
ಘಟನೆಯ ವಿವರ:
ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಲಾವತ್ತಡ್ಕ ಎಂಬಲ್ಲಿ ಹೆದ್ದಾರಿ ಬದಿ ಲಾರಿಯಲ್ಲಿ ನಿಲ್ಲಿಸಲಾಗಿದ್ದ ಹಿಟಾಚಿಗೆ ಡಿಕ್ಕಿ ಹೊಡೆದಿದೆ.
ನಸುಕಿನ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರ ಆಕ್ರಂದನ ಮುಗಿಲುಮುಟ್ಟಿತ್ತು.






