




ಮಂಗಳೂರು,: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ ಅವರು ಜೂನ್ 18ರ ಬುಧವಾರ ಸಂಜೆ ಅಧಿಕಾರ ಸ್ವೀಕರಿಸಿದರು.
ನಿರ್ಗಮನ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.
ಮುಲೈ ಮುಗಿಲನ್ ಎಂಪಿ ಜೂ.17, 2023ರಂದು ದ.ಕ. ಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ 2 ವರ್ಷ ಪುರ್ಣಗೊಳಿಸಿರುವ ಬೆನ್ನಲ್ಲೆ ಅವರಿಗೆ ವರ್ಗಾವಣೆಯಾಗಿದೆ.


