ಹೆಂಡತಿ ವಿಪರೀತ ಮೊಬೈಲ್‌ ಬಳಸುತ್ತಾಳೆಂದು ಸಿಟ್ಟುಗೊಂಡ ಪತಿ, ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬ್ರಹ್ಮಾವರ ತಾಲ್ಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.

ಹೊಸಮಠ ನಿವಾಸಿ ರೇಖಾ ಕೊಲೆಯಾದ ಮಹಿಳೆ. ಈಕೆಯ ಪತಿ ಗಣೇಶ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪತ್ನಿ ಯಾವಾಗಲೂ ವಿಪರೀತ ಮೊಬೈಲ್‌ ಉಪಯೋಗಿಸುತ್ತಾಳೆಂದು ಸಿಟ್ಟಿನಿಂದ ಮದ್ಯಪಾನ ಮಾಡಿಕೊಂಡು ಬಂದು ಜಗಳವಾಡಿ, ಆರೋಪಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!