ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ 17 ನೇ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ ಜೂನ್ 21 ಶನಿವಾರ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಸಾಲ್ಮರ ದಲ್ಲಿ ಧ್ವಜಾರೋಹಣ ಹಾಗೂ ಸಭಾ ಕಾರ್ಯಕ್ರಮ  ನಡೆಯಲಿದೆ.

ಕಾರ್ಯಕ್ರಮಕ್ಕೆ  ಬಂಟ್ವಾಳ ಪುರಸಭೆ ಉಪಾಧ್ಯಕ್ಷ ಮುನಿಶ್ ಅಲಿ,ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಗ್ರಾಮಾಂತರ ಜಿಲ್ಲೆ ದಕ್ಷಿಣ ಕನ್ನಡ ಇದರ ಪ್ರಧಾನ ಕಾರ್ಯದರ್ಶಿ
ಸಿದ್ದೀಕ್ ಪುತ್ತೂರು,ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನ ಕ್ಷೇತ್ರ ಸಮಿತಿ ಅಧ್ಯಕ್ಷ ಆಶ್ರಫ್ ಬಾವು,ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷ ಅಬ್ದುಲ್ ಹಮೀದ್ ಸಾಲ್ಮರ,ಪುತ್ತೂರು ನಗರ ಸಭೆ ಸದಸ್ಯರಾದ ಫಾತಿಮಾ ಝೋಹಾರ,ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ನಗರ ಸಮಿತಿ ಅಧ್ಯಕ್ಷ ಯಹ್ಯಾ KH ಹಾಗೂ ಪಕ್ಷದ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು, ಜಿಲ್ಲಾ ಮುಖಂಡರು, ಸಾಮಾಜಿಕ ಹೋರಾಟಗಾರರು, ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ
ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್  ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!